ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಗ್ಯಾಸ್ ಟ್ಯಾಂಕರ್ ಒಂದು ರಸ್ತೆ ಮದ್ಯೆಯೇ ಪಲ್ಟಿಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಬಂಟ್ವಾಳದ ಸೂರಿಕುಮೇರು ಮಸಿದಿ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಅದೃಷ್ಟವಶಾತ್ ಈವರೆಗೆ ಅನಿಲ ಸೋರಿಕೆಯಾಗಿಲ್ಲ. ಹಾಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.
ಮಸೀದಿಯಲ್ಲಿನ ಧ್ವನಿವರ್ಧಕದ ಮೂಲಕ ಸುತ್ತಮುತ್ತಲಿನ ಮನೆಗಳಲ್ಲಿ ಬೆಂಕಿ ಬಳಸದಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಗ್ಯಾಸ್ ಟ್ಯಾಂಕರ್ ಎತ್ತುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ