
ಪ್ರಗತಿವಾಹಿನಿ ಸುದ್ದಿ, ಯಲ್ಲಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 52 ರ ಹುಬ್ಬಳ್ಳಿ- ಅಂಕೋಲಾ ಮಾರ್ಗದ ಅರಬೈಲ್ ಘಟ್ಟದಲ್ಲಿ ಗ್ಯಾಸ್ ಟ್ಯಾಂಕರ್ ಒಂದು ಪಲ್ಟಿಯಾಗಿದ್ದು ಅನಿಲ ಸೋರಿಕೆಯಾಗಿ ಆತಂಕ ಸೃಷ್ಟಿಸಿದೆ.

ಹುಬ್ಬಳ್ಳಿಯಿಂದ ಮಹಾರಾಷ್ಟ್ರದ ರತ್ನಗಿರಿಗೆ ಹೋಗುತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತು. ಇದೇ ವೇಳೆ ಟ್ಯಾಂಕರ್ ನಿಂದ ಅಪಾರ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆರಂಭವಾದ ಕಾರಣ ಹುಬ್ಬಳ್ಳಿ-ಅಂಕೋಲ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಗ್ಯಾಸ್ ಸೋರಿಕೆ ತಡೆದು ಟ್ಯಾಂಕರ್ ಮೇಲೆತ್ತಲು ಕಾರ್ಯಾಚರಣೆ ನಡೆಸಿದ್ದಾರೆ. ಟ್ಯಾಂಕರ್ ನ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ