National

*ಸರಣಿ ಅಪಘಾತ: ಸ್ಥಳದಲ್ಲೇ 7 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಟ್ಯಾಂಕರ್ ವೊಂದು ಕಾರು ಹಾಗೂ ಜೀಪ್ ಗೆ ಡಿಕ್ಕಿ ಹೊಡೆದ ಪರಿಣಾಮ 7 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ದಾರ್ ಜಿಲ್ಲೆಯಲ್ಲಿ ನಡೆದಿದೆ.

ಗ್ಯಾಸ್ ಟ್ಯಾಂಕರ್ ಎದುರಿನಿಂದ ಬರುತ್ತಿದ್ದ ಕಾರು ಹಾಗೂ ಜೀಪ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೀಪ್ ನಲ್ಲಿದ್ದ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಬದ್ನಾವರ್-ಉಜ್ಜಯನಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

Home add -Advt

Related Articles

Back to top button