ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 18ನೇ ಆರೋಪಿ ರಿಷಿಕೇಶ್ನನ್ನು 15 ದಿನಗಳ ಕಾಲ ಎಸ್ಐಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೆ ಮತ್ತೊಬ್ಬ ಆರೋಪಿ ರಿಷಿಕೇಶ್ ದೇವಾಡಿಕರ್ ಅಲಿಯಾಸ್ ಮುರಳಿ ಎಂಬಾತನನ್ನು ಎಸ್ಐಟಿ ಪೊಲೀಸರು ಜಾರ್ಖಂಡ್ನಲ್ಲಿ ಬಂಧಿಸಿದ್ದರು. ರಿಷಿಕೇಶ್ನನ್ನು ಇಂದು ಸಿಟಿ ಸಿವಿಲ್ ಕೋರ್ಟ್ ಮುಂದೆ ಹಾಜರುಪಡಿಸಿದ ಎಸ್ಐಟಿ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ 30 ದಿನಗಳ ಕಾಲ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಎಸ್ಐಟಿ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಆರೋಪಿಯನ್ನು 15 ದಿನಗಳ ಕಾಲ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಆರೋಪಿ ರಿಷಿಕೇಶ್ ಗೌರಿ ಲಾಂಕೇಶ್ ಹತ್ಯೆ ಸಂಬಂಧಿಸಿದ ಸಾಕ್ಷ್ಯ ನಾಶಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ. ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್ಗಳನ್ನು ನಾಶ ಮಾಡಿದ್ದ ಎನ್ನಲಾಗಿದೆ. ಮೂರು ದಿನಗಳ ಹಿಂದೆ ಜಾರ್ಖಂಡ್ ಜಿಲ್ಲೆಯ ಖತ್ರಾಸ್ ಎಂಬ ಹಳ್ಳಿಯಲ್ಲಿ ಎಸ್ಐಟಿ ಆರೋಪಿಯನ್ನು ಬಂಧಿಸಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ