ಪ್ರಗತಿವಾಹಿನಿ ಸುದ್ದಿ: ಖ್ಯಾತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಹಾಗೂ ವಂಚನೆ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕಾದ ನ್ಯೂಯಾರ್ಕ್ ನ್ಯಾಯಾಲಯ ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ.
ಸೌರವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಮತ್ತು ಆರೋಪ ಮಎ ಮಾಚಲು ಯತ್ನ ಪ್ರಕರಣ ಸಂಬಂಧ ನ್ಯೂಯಾರ್ಕ್ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದ್ದು, ಗೌತಮ್ ಅದಾನಿ ವಿರುದ್ಧ ಬ್ಂಧನ ವಾರೆಂಟ್ ಜಾರಿಯಾಗಿದೆ.
2,237 ಕೋಟಿ ಲಂಚದ ಆರೋಪದಲ್ಲಿ ಗೌತಮ್ ಅದಾನಿ, ಸಾಗರ್ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್ ವಿರುದ್ಧ 5 ಅಂಶಗಳ ಕ್ರಿಮಿನಲ್ ಆರೋಪಪಟ್ಟಿಯನ್ನು ನ್ಯೂಯಾರ್ಕ್ ನ ಪೂರ್ವ ಜಿಲ್ಲಾ ನ್ಯಾಯಾಲಯಕ್ಕೆ ಅಮೆರಿಕದ ಪ್ರಾಸಿಕ್ಯೂಟರ್ ಸಲ್ಲಿಸಿದ್ದಾರೆ. ಭಾರತದಲ್ಲಿ ಬೃಹತ್ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಿನ 20 ವರ್ಷಗಳಲ್ಲಿ 2 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಆಕರ್ಷಿಸಲು ಭಾರತದ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಿದ ಹಾಗೂ ಅಮೆರಿಕ ಒಳಗೊಂಡತೆ ವಿದೇಶಿ ಹೂಡಿಕೆದಾರರಿಗೆ ತಪ್ಪು ಮಹಿತಿ ನೀಡಿದ ಆರೋಪ ಅದಾನಿ ಹಗೂ ಇತರರ ಮೇಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ