
ಪ್ರಗತಿವಾಹಿನಿ ಸುದ್ದಿ: ಖ್ಯಾತ ಯುವ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯ ಜೀವನದಲ್ಲಿ ಬಿರುಕು ಬಿಟ್ಟಿದ್ದು, ಜೋಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ಕನ್ನಡ ಕೋಗಿಲೆ ಖ್ಯಾತಿಯ ಅಖಲಾ ಪಜಿಮಣ್ಣು ಸುಮಧುರ ಕಂಠದ ಖ್ಯಾತ ಗಾಯಕಿ. ಮೂರು ವರ್ಷಗಳ ಹಿಂದೆ ಅಮೆರಿಕದಲ್ಲಿ ವಾಸವಾಗಿದ್ದ ಸಾಫ್ಟ್ ವೇರ್ ಇಂಜಿನಿಯರ್ ಧನರಾಜ್ ಶರ್ಮಾ ಎಂಬುವವರನ್ನು ವಿವಾಹವಾಗಿದ್ದರು. ಇಬ್ಬರದ್ದೂ ಅರೇಂಜ್ಡ್ ಮ್ಯಾರೇಜ್. ಎರಡೂ ಕುಟುಂಬಗಳು ಒಪ್ಪಿ ಅದ್ಧೂರಿಯಾಗಿ ವಿವಾಹ ಮಾಡಿದ್ದರು.
ಆದರೆ ಅದೇನಾಯಿತೋ ಏನೋ ದಂಪತಿ ಬಾಳಲ್ಲಿ ಬಿರುಕು ಮೂಡಿದೆ. ಇಬ್ಬರೂ ಪರಸ್ಪರ ಒಪ್ಪಿ ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ. ಇಂದು ಪುತ್ತೂರು ಕೋರ್ಟ್ ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲಿದ್ದಾರೆ.
 
					 
				 
					 
					 
					 
					
 
					 
					 
					


