Kannada NewsKarnataka NewsLatest

*ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ*

ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಗವಿಸಿದ್ದೇಶ್ವರ ಶ್ರೀಗಳನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ಅಧಿಕೃತವಾಗಿ ಆಹ್ವಾನಿಸಿದರು.

ಕೊಪ್ಪಳದ ಗವಿ ಮಠಕ್ಕೆ ತೆರಳಿದ ಸಚಿವ ಶಿರಾಜ್ ತಂಗಡಿಗಿ ಗವಿ ಸಿದ್ದೇಶ್ವರ ಸ್ವಾಮೀಜಿಗಳಿಗೆ ಫಲಪುಷ್ಪ ನೀಡಿ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಿದರು. ಈ ವೇಳೆ ಶ್ಹ್ರೀಗಳು ದಸರಾ ಉದ್ಘಾಟನೆಗೆ ಬರಲು ಸಂತೋಷದಿಂದ ಒಪ್ಪಿಕೊಂಡರು.

ಈ ಸಂದರ್ಭದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button