Kannada NewsKarnataka NewsLatest

*ಜಿಬಿಎ ಚುನಾವಣೆ: ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ; ಈ ಹಿಂದೆ ನೀಡಿದ್ದ ಗಡುವು ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಕೈಗೊಂಡಿದೆ. ಈ ಹಿಂದೆ ನೀಡಿದ್ದ ಗಡುವನ್ನು ವಿಸ್ತರಿರಿಸಿ ಆದೇಶ ಹೊರಡಿಸಿದೆ.

Home add -Advt

ಜಿಬಿಎ ಚುನಾವಣೆಗೆ ಜೂನ್​​ 30ರ ವರೆಗೆ ಈ ಹಿಂದೆ ನೀಡಿದ್ದ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿರುವ ಸುಪ್ರೀಂ ಕೋರ್ಟ್, ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ಪೀಠ ಈ ಬಗ್ಗೆ ಆದೇಶ ನೀಡಿದ್ದು, ಕರ್ನಾಟಕ ಸರ್ಕಾರದ ಪರ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಗಡುವು ವಿಸ್ತರಣೆ ಕೋರಿ ಮನವಿ ಸಲ್ಲಿಸಿದ್ದರು. ಚುನಾವಣೆಗೆ ಅಗತ್ಯ ಸಿದ್ಧತೆಗಳೆಲ್ಲ ಪೂರ್ಣಗೊಂಡಿದ್ದರೂ SIR ಕಾರ್ಯದಿಂದ ಸಿಬ್ಬಂದಿ ಸಮಸ್ಯೆ ಉಂಟಾಗಿದೆ. ಕನಿಷ್ಠ ಎರಡರಿಂದ ಮೂರು ತಿಂಗಳ ಅವಧಿ ವಿಸ್ತರಣೆ ಅಗತ್ಯವಾಗಿದೆ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇತ್ತ ರಾಜ್ಯ ಚುನಾವಣಾ ಆಯೋಗವೂ ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವಂತೆ ಕೋರ್ಟ್​​ ಈ ಹಿಂದೆ ನೀಡಿದ್ದ ಗಡುವು ವಿಸ್ತರಣೆಗೆ ಕೋರಿ ಮನವಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಜಿಬಿಎ ಚುನಾವಣೆಗೆ ಆಗಸ್ಟ್ 31ರವರೆಗೆ ಗಡುವು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.


Related Articles

Back to top button