*ಜಿಬಿಎ ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ:“ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.
“ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು” ಎಂದು ಹೇಳಿದರು.
ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ಸ್ವರೂಪ ಕುರಿತ ಸಭೆಯ ಬಗ್ಗೆ ಕೇಳಿದಾಗ, “ಈ ವಿಚಾರ ಅನೇಕ ವರ್ಷದಿಂದಲೂ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಹಾಗೂ ಎಚ್ಎಎಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದರು.
ಬೋವಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನಗೆ ತಿಳಿದಿಲ್ಲ. ಇದಕ್ಕೆ ಸಂಬಂಧಪಟ್ಟ ಸಚಿವರ ಬಳಿ ಮಾಹಿತಿ ಪಡೆದುಕೊಳ್ಳುತ್ತೇನೆ” ಎಂದರು.
Senior officers to be appointed for five corporations of Greater Bengaluru Authority: DCM DK Shivakumar
Bengaluru, Sep 1: Deputy Chief Minister D K Shivakumar today said that senior officers with extensive administrative experience would be appointed as commissioners for the five corporations formed under the Greater Bengaluru Authority.
Speaking to reporters at Vidhana Soudha, he said, “We discussed the appointment of officials for the corporations, and we have decided to appoint those officials who are currently working locally.”
Asked about use of helicopters and aircraft for official government work, he said, “This topic has been before the government for several years. The CM had given me the responsibility of taking a decision on this and calling for tenders. We are trying to study the models from other states and hold discussions with HAL too.”
Asked about allegations of corruption in Bhovi Development Corporation, he said, “I don’t have information on that, I will collect information from the respective minister.”