ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ನಡುವೆ ಇಂದು ನಟ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಕುತೂಹಲವನ್ನು ಇಮ್ಮಡಿಗೊಳಿಸಿದೆ.
ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದು, ಇದರ ಬೆನ್ನಲ್ಲೇ ಸಹೋದರಿ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಮಧು ಬಂಗಾರಪ್ಪನವರೇ ಘೋಷಿಸಿದ್ದರು. ಇದರ ಬೆನ್ನಲ್ಲೇ ಇದೀಗ ಶಿವರಾಜ್ ಕುಮಾರ್, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, ನಾನು ಯಾವುದೇ ರಾಜಕೀಯ ವಿಚಾರ ಚರ್ಚೆಗಾಗಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿಲ್ಲ. ಇದೊಂದು ಸೌಜನ್ಯಯುತವಾದ ಭೇಟಿ ಅಷ್ಟೇ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ