
ಪ್ರಗತಿವಾಹಿನಿ ಸುದ್ದಿ: ರಂಜಾನ್ ಮುನ್ನಾದಿನ ಮಸೀದಿಯಲ್ಲಿ ಸ್ಫೋಟ ಸಂಭವಿಸಿರುವ ಘಟನೆ ಗೊಂಡಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಜಿಯೋರೈ ನ ಮಸ್ಲಾ ಗ್ರಾಮದಲ್ಲಿ ನಡೆದಿದೆ.
ಮಸೀದಿಯಲ್ಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಮಸೀದಿ ಒಳಭಾಗ ಹಾನಿಯಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಓರ್ವ ವ್ಯಕ್ತಿ ಮಸೀದಿ ಹಿಂಭಾಗದಿಂದ ಪ್ರವೇಶಿಸಿ ಜಿಲೆಟಿನ್ ಗಳನ್ನು ಇಟ್ಟಿದ್ದ. ಇದರಿಂದಾಗಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.