
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಸಾರ್ವತ್ರಿಕ ವರ್ಗಾವಣೆಗೆ ಸರಕಾರ ಅನುಮತಿ ನೀಡಿದೆ. ಜುಲೈ 22ರವರೆಗೆ ಸಾರ್ವತ್ರಿಕ ವರ್ಗಾವಣೆ ನಡೆಯಲಿದೆ.
ಶೇ.6ನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಮಾಡಬಹುದು ಎಂದಿರುವ ಸರಕಾರ, ಸಂಬಂಧಿಸಿದ ಸಚಿವರಿಗೆ ಸಂಪೂರ್ಣ ಅಧಿಕಾರ ನೀಡಿದೆ. ಬಿ ಮತ್ತು ಸಿ ವರ್ಗದ ಸಿಬ್ಬಂದಿ ವರ್ಗಾವಣೆಗೆ ಮಾತ್ರ ಅವಕಾಶ ನೀಡಲಾಗಿದೆ.
ಇದರಿಂದಾಗಿ ಕೊರೋನಾದಿಂದ ಸಂಕಷ್ಟದಿಂದಾಗಿ ಆಡಳಿತ ಅಸ್ತವ್ಯಸ್ತವಾಗಿರುವ ಸಂದರ್ಭದಲ್ಲಿ ಮತ್ತೊಮ್ಮೆ ಆಡಳಿತ ವ್ಯವಸ್ಥೆ ಅಲ್ಲೋಲ ಕಲ್ಲೋಲವಾಗಬಹುದು.
ಬಹುತೇಕ ಎಲ್ಲ ಇಲಾಖೆಗಳಲ್ಲೂ ವರ್ಗಾವಣೆ ನಡೆಯಲಿದ್ದು, ರಾಜಕಾರಣಿಗಳೊಂದಿಗೆ ಮಧ್ಯವರ್ತಿಗಳ ಹಾವಳಿಯೂ ಹೆಚ್ಚಾಗಬಹುದು.
ರಾಜ್ಯ, ಬೆಳಗಾವಿ ಜಿಲ್ಲೆಯ ಇಂದಿನ ಕೊರೋನಾ ಮಾಹಿತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ