ಪ್ರಗತಿವಾಹಿನಿ ಸುದ್ದಿ, ನ್ಯೂಯಾರ್ಕ್: ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಕೇಂದ್ರವಾಗಿರುವ ಎನ್ ವೈಯು ಲಾಂಗೀನ್ ಹೆಲ್ತ್ ನ ವೈದ್ಯಕೀಯ ತಂಡ ಇತ್ತೀಚೆಗೆ ಮೃತಪಟ್ಟ ಇಬ್ಬರು ವ್ಯಕ್ತಿಗಳಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಗಳ ಹೃದಯಗಳನ್ನು ಯಶಸ್ವಿಯಾಗಿ ಕಸಿ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಹೃದಯ ಕಾಯಿಲೆ ಪಿಡುಗಾಗಿ ಮಾರ್ಪಟ್ಟಿದ್ದು ಪರ್ಯಾಯ ಅಂಗ ಕಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಪ್ರಯೋಗ ನಡೆದಿದೆ.
ಹಲವು ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ನಂತರ ಸತತ ಮೂರು ದಿನಗಳ ಕಾಲ ಕಸಿ ಮಾಡಿದ ಹೃದಯದ ಕಾರ್ಯವೈಖರಿಯನ್ನು ಪರಿಶೀಲಿಸಲಾಯಿತು. ಎರಡೂ ಕಸಿ ಮಾಡಿದ ಹೃದಯಗಳು ಯಾವುದೇ ನಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸದೆ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ಮುಂಬರುವ ದಿನಗಳಲ್ಲಿ ಇದು ಹೃದಯ ಕಾಯಿಲೆಗಳಿಗೆ ರಾಮಬಾಣವಾಗುವ ಎಲ್ಲ ಲಕ್ಷಣಗಳನ್ನು ತೋರ್ಪಡಿಸಿದೆ.
ಭಾರಿ ಮಳೆ ಅವಾಂತರ; 32 ಜನರ ಸಾವು; 1065 ಮನೆಗಳಿಗೆ ಹಾನಿ; 5 ಜನರು ನಾಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ