
ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ಜೆರೋಶಾ ಶಾಲೆಯ ಶಿಕ್ಷಕಿಯಿಂದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ತನಿಖೆಗೆ ಐಎ ಎಸ್ ಅಧಿಕಾರಿ ನೇತೃತ್ವದಲ್ಲಿ ಸರ್ಕಾರ ತನಿಖೆಗೆ ಆದೇಶ ನೀಡಿದೆ.
ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಪ್ರಕರಣದ ತನಿಖೆಗೆ ಐಎ ಎಸ್ ಅಧಿಕಾರಿ ಡಾ.ಎಸ್.ಆಕಾಶ್ ಅವರನ್ನು ನೇಮಕ ಮಾಡಲಾಗಿದೆ ಎಂದಿದ್ದಾರೆ.
ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಸೂಚಿಸಲಾಗಿದೆ. ಶೀಘ್ರದಲ್ಲಿ ಸತ್ಯಾಸತ್ಯತೆ ಬಯಲಾಗಲಿದೆ ಎಂದು ಹೇಳಿದರು.
ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಹಿಂದೂ ಧರ್ಮದ ಬಗ್ಗೆ ಶಾಲೆಯಲ್ಲಿ ಅವಹೇಳನವಾಗಿ ಮಾತನಾಡಿದ್ದರು ಎಂಬ ಆರೋಪ ಕೇಳಿಬಂದಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಪ್ರಕರಣ ರಾಜಕೀಯ ತಿರುವು ಪಡೆದಿತ್ತು. ಶಿಕ್ಷಕಿಯನ್ನು ಅಮಾನತು ಮಾಡಲಾಗಿತ್ತು. ಪ್ರಕರಣ ಸಂಬಂಧ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧವೂ ಎಫ್ ಐ ಆರ್ ದಾಖಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ