Belagavi NewsBelgaum NewsKarnataka News
ಗೋಕಾಕ್ ನಲ್ಲಿ ಘಟಪ್ರಭಾ ಪ್ರವಾಹ; 300ಕ್ಕೂ ಹೆಚ್ಚು ಮನೆಗಳು ಮುಳುಗಡೆ; ರಾತ್ರೋರಾತ್ರಿ ಊರು ತೊರೆದ ಜನರು
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ನದಿಗಳು ಬೋರ್ಗರೆದು ತುಂಬಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಯಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿಯ ಪ್ರವಾಹದಿಂದಾಗಿ 300ಕ್ಕೂ ಹೆಚ್ಚು ಮನೆಗಳು, 150ಕ್ಕೂ ಹೆಚ್ಚು ಅಂಗಡಿಗಳು ಮುಳುಗಡೆಯಾಗಿದ್ದು, ಮಾರುಕಟ್ಟೆ, ಅಂಗಡಿಗಳು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.
ಮನೆಗಳು, ಅಂಗಡಿಗಳು, ಬೇಕರಿ, ಗ್ಯಾರೇಜ್ ಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ರಾತ್ರೋರಾತ್ರಿ ಜನರು ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ. ಅಂಗಡಿಗಳಲ್ಲಿನ ಸಾಮಗ್ರಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಘಟಪ್ರಭಾ ನದಿ ಆರ್ಭಟಕ್ಕೆ ಗೋಗಾಕ್ ಜನತೆ ತತ್ತರಿಸಿ ಹೋಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ