ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ಘಟಪ್ರಭಾ ನದಿ ಆರ್ಭಟಕ್ಕೆ ಒಂದೇ ತಾಲೂಕಿನಲ್ಲಿ 6 ಸೇತುವೆಗಳು ಮುಳುಗಡೆಯಾಗಿವೆ.
ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮೂಡಲಗಿ ತಾಲೂಕಿನಲ್ಲಿ 6 ಸೇತುವೆಗಳು ಮುಳುಗಡೆಯಾಗಿವೆ.
ವಡೇರಹಟ್ಟಿ-ಉದಗಟ್ಟಿ ಸಂಪರ್ಕ ಕಲ್ಪಿಸುವ ಸೇತುವೆ ಸೇರಿದಂತೆ 6 ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮಗಳಿಗೆ, ಜಮೀನುಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಕಬ್ಬು ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. ಘಟಪ್ರಭಾ ಅಬ್ಬರಕ್ಕೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ರೈತರು, ಗ್ರಾಮಸ್ಥರು ಸಂಕಷ್ಟಕ್ಕೀಡಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ