Latest

ಕಪಿಲಾ ನದಿಯಲ್ಲಿ ಈಜಲು ಜಿಗಿದ ಹುಡುಗರು; ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಯುವಕ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಭಾರಿ ಮಳೆಯಿಂದಾಗಿ ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿದ್ದು, ತುಂಬಿ ಹರಿಯುತ್ತಿದ್ದ ನದಿ ನೀರಿನಲ್ಲಿ ಹುಚ್ಚಾಟ ಮೆರೆಯಲು ಹೋಗಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಕಪಿಲಾ ನದಿಯಲ್ಲಿ ನಡೆದಿದೆ.

ನದಿ ನೀರಿನಲ್ಲಿ ಈಜಲು ಮೂವರು ಯುವಕರು ನಂಜನಗೂಡು ತಾಲೂಕಿನ ಹೆಜ್ಜಿಗೆ ಸೇತುವೆಯಿದ ಕಪಿಲಾ ನದಿಗೆ ಹಾರಿದ್ದಾರೆ. ತುಂಬಿ ಹರಿಯುತ್ತಿದ್ದ ನದಿಯಲ್ಲಿ ಈಜಾಡಿ ಹುಚ್ಚಾಟ ಮೆರೆದಿದ್ದಾರೆ. ನೀರಿನ ರಭಸಕ್ಕೆ ಸಿಕ್ಕ ಯುವಕನೊಬ್ಬ ನೋಡ ನೋಡುತ್ತಿದ್ದಂತೆ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ.

Home add -Advt

ಆತನ ಜತೆಗಿದ್ದ ಇಬ್ಬರು ಯುವಕರು ಈಜಿ ದಡ ಸೇರಿದ್ದಾರೆ. ಅಹಮದ್ ಕರಿಂ ಎಂಬ ಯುವಕ ನದಿಯಲ್ಲಿ ನಾಪತ್ತೆಯಾಗಿದ್ದು, ನೀರುಪಾಲಾದ ಯುವಕನಿಗಾಗಿ ಶೋಧ ನಡೆಸಲಾಗುತ್ತಿದೆ. ಆದರೆ ಭಾರಿ ಮಳೆಯಿಂದಾಗಿ ಕಪಿಲಾನದಿ ತುಂಬಿ ಹರಿಯುತ್ತಿದ್ದು, ಶೋಧಕಾರ್ಯಕ್ಕೆ ಅಡ್ಡಿಯುಂಟಾಗಿದೆ.
ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್; ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ

Related Articles

Back to top button