Kannada NewsKarnataka NewsLatest

*ರಥೋತ್ಸವದ ವೇಳೆ ತಪ್ಪಿದ ಅನಾಹುತ; ಕೆಳಗೆ ಬಿದ್ದ ಮಹಿಳೆ ಜಸ್ಟ್ ಎಸ್ಕೇಪ್*

ಪ್ರಗತಿವಾಹಿನಿ ಸುದ್ದಿ: ಘಾಟಿ ಸುಬ್ರಹ್ಮಣ್ಯ ದೇಗುಲದ ರಥೋತ್ಸವದ ವೇಳೆ ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಆಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವ ನಡೆಯುತ್ತಿದ್ದು, ಈ ವೇಳೆ ಜನಜಂಗುಳಿಯಿಂದ ನೂಕು ನುಗ್ಗಲು ಉಂಟಾಗಿದೆ. ಮಹಿಳೆಯೊಬ್ಬರು ರಥದ ಚಕ್ರದ ಬಳಿ ಬಿದ್ದಿದ್ದಾರೆ.

ತಕ್ಷಣ ಎಚ್ಚೆತ್ತ ದೇವಸ್ಥಾನದ ಸಿಬ್ಬಂದಿ ಮಹಿಳೆಯನ್ನು ಮೇಲಕ್ಕೆತ್ತಿದ್ದಾರೆ. ಮಹಿಳೆ ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.

ಪುಷ್ಯ ಶುದ್ಧ ಷಷ್ಠಿ ಹಿನ್ನೆಲೆಯಲ್ಲಿ ಇಂದು ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವ ನಡೆದಿದ್ದು, ರಥೋತ್ಸವಕ್ಕೆ ಸಚಿವ ಕೆ.ಹೆಚ್.ಮುನಿಯಪ್ಪ ಚಾಲನೆ ನೀಡಿದರು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button