Latest

*ಉಪವಿಭಾಗಾಧಿಕಾರಿ ಮಂಜುನಾಥ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಮನಗರ ಉಪವಿಭಾಗಾಧಿಕಾರಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಮನಗರ ಉಪವಿಭಾಗಾಧಿಕಾರಿ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.

ಕಳೆದ ವರ್ಷ ಮಾರ್ಚ್ 16ರಂದು ಮಂಜುನಾಥ್ ಅವರ ಮನೆ, ಫಾರ್ಮ್ ಹೌಸ್, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದಾಯಕ್ಕಿಂತ ಶೇ.216ರಷ್ಟು ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಉಪವಿಭಗಾಧಿಕಾರಿ ಮಂಜುನಾಥ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

Related Articles

Back to top button