ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಗಿರೀಶ್ ಕಾರ್ನಾಡ್ ಅವರು 1938ರ ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ.
ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ -1974, ಪದ್ಮಭೂಷಣ -1992, ಜ್ಞಾನಪೀಠ -1998,ಕಾಳಿದಾಸ ಸಮ್ಮಾನ್ – 1998ರಲ್ಲಿ ಲಭಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ