
ಪ್ರಗತಿವಾಹಿನಿ ಸುದ್ದಿ: ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ದಿನಕ್ಕೊಂದು ಪ್ರಕರಣಗಳು ದಾಖಲಾಗುತ್ತಿವೆ. ಇದೀಗ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ.
ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣವರ್ ವಿರುದ್ಧ ರಾಜೇಂದ್ರ ದಾಸ್ ಎಂಬುವವರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಅಖಲಾಗಿದೆ.
ಬಿಎನ್ ಎಸ್ ಕಾಯ್ದೆ 296ರಂತೆ ಪ್ರಕರಣ ದಾಖಲಾಗಿದೆ. ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ನಕಲಿ ಅಧಿಕಾರಿಯನ್ನು ತೋರಿಸಿದ ಆರೋಪದಲ್ಲಿ ಮೊನ್ನೆಯಷ್ಟೇ ಗಿರೀಶ್ ಮಟ್ಟಣ್ಣವರ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಮತ್ತೊಂದು ಕೇಸ್ ದಾಖಲಾಗಿದೆ.