Kannada NewsKarnataka NewsLatest

ಗೋವಾ ಸಿಎಂ, ಬಿ.ಎಲ್.ಸಂತೋಷ್ ಭೇಟಿಯಾದ ಡಾ. ಗಿರೀಶ್ ಸೋನವಾಲ್ಕರ್

 ಪ್ರಗತಿವಾಹಿನಿ ಸುದ್ದಿ, ನವದೆಹಲಿ/ ಪಣಜಿ – ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿ, ಇಲ್ಲಿಯ ಲೇಕ್ ವ್ಯೂವ್ ಆಸ್ಪತ್ರೆಯ ವೈದ್ಯ ಡಾ.ಗಿರೀಶ್ ಸೋನವಾಲ್ಕರ್ ನವದೆಹಲಿಯಲ್ಲಿ ಇಂದು ಬಿಜೆಪಿಯ ಕೆಲವು ಹಿರಿಯ ನಾಯಕರನ್ನು ಭೇಟಿಯಾಗಿದ್ದಾರೆ.

ಬೆಳಗ್ಗೆ ಗೋವಾಕ್ಕೆ ತೆರಳಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರನ್ನು ಭೇಟಿ ಮಾಡಿದ ಸೋನವಾಲ್ಕರ, ಅಲ್ಲಿಂದ ನವದೆಹಲಿಗೆ ತೆರಳಿದ್ದಾರೆ.

Home add -Advt

ಗೋವಾದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ ಅವರೊಂದಿಗೆ ಕೆಲಹೊತ್ತು ಮಾತುಕತೆ ನಡೆಸಿದ ಸೋನವಾಲಕರ್, ಬೆಳಗಾವಿ ಲೋಕಸಭೆಗೆ ಸ್ಪರ್ಧಿಸಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ.

ನಂತರ ನವದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಅವರು, ಈವರೆಗಿನ ತಮ್ಮ ಸಾಮಾಜಿಕ ಕೆಲಸಗಳ ಕುರಿತು ಮಾಹಿತಿ ನೀಡಿದ್ದಾರೆ. ಜೊತೆಗೆ ಟಿಕೆಟ್ ನೀಡಿದರೆ ಗೆಲ್ಲಲು ಇರುವ ಅವಕಾಶಗಳ ಕುರಿತೂ ವಿವರಿಸಿದ್ದಾರೆ ಎಂದು ಗೊತ್ತಾಗಿದೆ.

ಈ ಕುರಿತು ಪ್ರಗತಿವಾಹಿನಿ ಡಾ.ಸೋನವಾಲ್ಕರ್ ಅವರನ್ನು ಸಂಪರ್ಕಿಸಿದಾಗ, ಖಾಸಗಿ ಕೆಲಸಕ್ಕಾಗಿ ನವದೆಹಲಿಗೆ ಬಂದಿದ್ದೇನೆ. ಇದೇ ವೇಳೆ ಸೌಹಾರ್ದಯುತವಾಗಿ ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ಗೋವಾದಲ್ಲಿ ಪ್ರಮೋದ ಸಾವಂತ ಅವರನ್ನು ಹಾಗೂ ನವದೆಹಲಿಯಲ್ಲಿ ಬೆಳಗ್ಗೆ ಬಿ.ಎಲ್.ಸಂತೋಷ ಅವರನ್ನು ಭೇಟಿ ಮಾಡಿದ್ದೇನೆ. ಇನ್ನೂ ಕೆಲವರನ್ನು ಭೇಟಿಯಾಗಲಿದ್ದೇನೆ ಎಂದು ತಿಳಿಸಿದರು.
ಒಟ್ಟಾರೆ ಬೆಳಗಾವಿ ಲೋಕಸಭಾ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಆಕಾಂಕ್ಷಿಗಳು ಪಕ್ಷದ ಹಿರಿಯ ನಾಯಕರ ಮೂಲಕ ಟಿಕೆಟ್ ಪಡೆಯಲು ಪ್ರಯತ್ನ ಮುಂದುವರಿಸಿದ್ದಾರೆ.

Related Articles

Back to top button