*ಜೋಕಾಲಿ ಆಡುವಾಗ ಕುತ್ತಿಗೆಗೆ ಸುತ್ತಿಕೊಂಡ ವೇಲ್: ಬಾಲಕಿ ಸಾವು*

ಪ್ರಗತಿವಾಹಿನಿ ಸುದ್ದಿ: ಜೋಕಾಲಿ ಆಡುತ್ತಿದ್ದಾಗ ಬಾಲಕಿ ದುಪ್ಪಟ್ಟಾ ಕತ್ತಿಗೆ ಬಿಗಿದು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆರ್ನಮಕ್ಕಿಯ ಸಬ್ಬತ್ತಿಯಲ್ಲಿ ಈ ದುರಂತ ನಡೆದಿದೆ. 12 ವರ್ಷದ ಪ್ರಣಿತಾ ನಾಯ್ಕ್ ಮೃತ ಬಾಲಕಿ. ಮನೆಯಲ್ಲಿ ಜೋಕಾಲಿ ಆಡುತ್ತಿದ್ದ ವೇಳೆ ಚೂಡಿದಾರ್ ವೇಲ್ ಜೋಕಾಲಿಗೆ ಸಿಲುಕಿ ಕುತ್ತಿಗೆಗೆ ಸುತ್ತಿಕೊಂಡಿದೆ. ಬಾಲಕಿ ತೀವ್ರ ಅಸ್ವಸ್ಥಳಾಗಿದ್ದಳು. ತಕ್ಷಣ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.Home add -Advt ಮುರ್ಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ … Continue reading *ಜೋಕಾಲಿ ಆಡುವಾಗ ಕುತ್ತಿಗೆಗೆ ಸುತ್ತಿಕೊಂಡ ವೇಲ್: ಬಾಲಕಿ ಸಾವು*