
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯೊಬ್ಬಳು ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡಿನಲ್ಲಿ ನಡೆದಿದೆ.
ಮೃತ ದುರ್ದೈವಿ ಬಾಲಕಿಯನ್ನು ಐಸಿರಿ (14) ಎಂದು ಗುರುತಿಸಲಾಗಿದೆ. ಈಕೆ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ICSC) ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ಬಾಲಕಿ ಐಸಿರಿಯು ಕೆಲ ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದಳು. ಬಳಿಕ ಈಕೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆಕೆಗೆ ಕಿಡ್ನಿ ವೈಫಲ್ಯ ಸಹ ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ