
ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಗೀಸರ್ ಸೋರಿಕೆಯಾಗಿ 20 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗದಲ್ಲಿ ಈ ದುರಂತ ಸಂಭವಿಸಿದೆ. ಬಿಎಸ್ ಸಿ ಓದುತ್ತಿದ್ದ 20 ವರ್ಷದ ಯುವತಿ ಮನೆಯಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ನೂತನ ಮೃತ ಯುವತಿ.
ಮಗಳ ಸಾವಿನಿಂದ ಕಂಗಾಲಾದ ಪೋಷಕರು ಪೋಸ್ಟ್ ಮಾರ್ಟಮ್ ಗೂ ಬಿಡದೇ ಹಠ ಹಿಡಿದಿದ್ದರು. ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ಯುವತಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.



