Kannada NewsKarnataka NewsLatest

*ಗ್ರೈಂಡರ್ ನಿಂದ ಕರೆಂಟ್ ಶಾಕ್: ನಾಲ್ಕು ವರ್ಷದ ಬಾಲಕಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಗ್ರೈಂಡರ್​ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ.

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪುಟ್ಟಮ್ಮ ಹಾಗೂ ಆನಂದ್ ದಂಪತಿಯ ಪುತ್ರಿ ಅದ್ವಿತಾ ಮೃತ ದುರ್ದೈವಿ. ಮನೆಯಲ್ಲಿ ಆಟವಾಡುತ್ತಿದ್ದ ಅದ್ವಿತಾ ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದಳು. ಈ ವೇಳೆ ಅಡುಗೆ ಮನೆಯಲ್ಲಿ ಆನ್ ಆಗಿದ್ದ ಗ್ರೈಂಡರ್ ಅನ್ನು ಮುಟ್ಟಿದ್ದಾಳೆ. ಗ್ರೈಂಡರ್ ಅನ್ನು ಮುಟ್ಟಿದ ತಕ್ಷಣವೇ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಅದ್ವಿತಾಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button