Latest

*15 ವರ್ಷದ ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುರುಳರು*

ಪ್ರಗತಿವಾಹಿನಿ ಸುದ್ದಿ: 15 ವರ್ಷದ ಬಾಲಕಿಗೆ ದುರುಳರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಒಡಿಶಾದ ಬಯಾಬರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಾಲಕಿ ತನ್ನ ಸ್ನೇಹಿತನ ಮನೆಗೆ ಹೋಗುತ್ತಿದ್ದಾಗ ಮೂವರು ಆಕೆಯನ್ನು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಹತ್ಯೆಗೆ ಯತ್ನಿಸಿದ್ದಾರೆ.

ಬಾಲಕಿಯ ದೇಹದ ಶೇ.೭೦ರಷ್ಟು ಭಾಗ ಸುಟ್ಟುಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಲಂಗಾ ಪೊಲೀಸ್ ಠಾಣೆಯಿಂದ ಕೇವಲ 15 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.

Home add -Advt

ಘಟನೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಹುಡುಕಾಟ ನಡೆಸಿದ್ದಾರೆ.

Related Articles

Back to top button