Karnataka News

*ಯುವತಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ ಯುವತಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರೇಯಸ್, ಶಶಾಂಕ್ ಬಂಧಿತ ಆರೋಪಿಗಳು. ಮೈಸೂರಿನ ವಿಜಯನಗರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Home add -Advt

ಮೈಸೂರಿನ ಪಬ್ ವೊಂದರಲ್ಲಿ ಯುವತಿ ಪರಿಚಯವಾಗಿದ್ದಾಳೆ. ರೂಂ ಬುಕ್ ಮಾಡಿ ಯುವತಿಯನ್ನು ಕರೆದೊಯ್ದಿದ್ದ ಓರ್ವ ಆರೋಪಿ. ಬಳಿಕ ಸ್ನೇಹಿತನನ್ನು ರೂಂ ಗೆ ಕರೆಸಿಕೊಂಡು ಇಬ್ಬರೂ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದ ವಿಡಿಯೋ ಕೂಡ ಮಾಡಿಟ್ಟುಕೊಂಡಿದ್ದಾರೆ. ಖುದ್ದು ಸಂತ್ರಸ್ತ ಯುವತಿಯೇ ವಿಜಯನಗರ ಠಾಣೆಗೆ ಬಂದು ದೂರು ನೀಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರ ಬಳಿ ಇರುವ ಮೊಬೈಲ್ ವಶಕ್ಕೆ ಪಡೆದು ಪರಿಶಿಲನೆ ನಡೆಸಲಾಗಿದೆ. ತನಿಖೆ ಮುಂದುವರೆದಿದೆ.

Related Articles

Back to top button