
ಮೂವರು ಕಾಮುಕರು ಅರೆಸ್ಟ್
ಪ್ರಗತಿವಾಹಿನಿ ಸುದ್ದಿ: ಸಿದ್ದಗಂಗಾ ಮಠದ ಜಾತ್ರೆಗೆ ಆಗಮಿಸಿದ್ದ ಬಾಲಕಿಯನ್ನು ಅಪಹರಿಸಿ ಕಾಮುಕರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ತುಮಕೂರು ನಗರದ ಹೊರವಲಯದ ಬಂಡೆಪಾಳ್ಯದ ಮನೆಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂವರು ಕಾಮುಕರನ್ನು ಬಂಧಿಸಲಾಗಿದೆ.
ಬಂಡೆಪಾಳ್ಯದಲ್ಲಿ ವಾಸವಾಗಿದ್ದ ಅಮೋಘ್, ಹನುಮಂತ, ಪ್ರತಾಪ್ ಬಂಧಿತ ಆರೋಪಿಗಳು. ಬಾಲಕಿ ತನ್ನ ಸ್ನೇಹಿತನ ಜೊತೆ ಇರುವುದನ್ನು ಗಮನಿಸಿದ್ದ ಕಾಮುಕರು ಅದನ್ನು ರೆಕಾರ್ಡ್ ಮಾಡಿಕೊಂಡು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ ಬಲವಂತದಿಂದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ದುರುಳರು. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ.
 
					 
				 
					 
					 
					 
					
 
					 
					 
					


