*ಕಂಡಕ್ಟರ್ ಮೇಲಿನ ಪೋಕ್ಸೊ ಕೇಸ್ ವಾಪಸ್: ಬಾಲಕಿಯ ಪೋಷಕರ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧ ದಾಖಲಿಸಿದ ಪೋಕ್ಸೋ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಅಪ್ರಾಪ್ತ ಬಾಲಕಿಯ ಪೋಷಕರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿಯಿಂದ ಬಾಳೇಕುಂದ್ರಿಗೆ ಬರುತ್ತಿದ್ದರು. ಟಿಕೆಟ್ ಸಂಬಂಧ ಆಗಿರೋ ಜಗಳ ಇದು. ಇದನ್ನು ಕನ್ನಡ, ಮರಾಠಿ ಎಂದು ಪ್ರಚಾರ ಮಾಡ್ತಿದ್ದಾರೆ. ನಾವು ಕನ್ನಡದ ಅಭಿಮಾನಿಗಳು, ನಮ್ಮಲ್ಲಿ ಜಾತಿ ಭೇದಬಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡ್ತಿದ್ದಾರೆ. ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ. ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಿ. ಕೇಸ್ ಸ್ವ ಇಚ್ಛೆಯಿಂದ ವಾಪಸ್ ಪಡೆಯುತ್ತಿದ್ದೇವೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ