ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಯುವತಿಯೋರ್ವಳು ಕೊಚ್ಚಿ ಹೋಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಬಳಿ ನಡೆದಿದೆ.
18 ವರ್ಷದ ದಾನೇಶ್ವರಿ ನೀರು ಪಾಲಾದ ಯುವತಿ. ತಾಯಿ ಜೊತೆ ಬಟ್ಟೆ ತೊಳೆಯಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹಳ್ಳದಲ್ಲಿ ಬಿದ್ದು, ತಾಯಿ ಕಣ್ಮುಂದೆಯೇ ತುಂಬಿ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ಮಗಳು ಕೊಚ್ಚಿ ಹೋಗಿದ್ದಾಳೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದು ಯುವತಿಗಾಗಿ ಶೋಧಕಾರ್ಯ ನಡೆಸಿದ್ದಾರೆ.
ಕನ್ನಡದಲ್ಲಿ ಬರೆದಿದ್ದ ಚೆಕ್ ತಿರಸ್ಕರಿಸಿದ ಬ್ಯಾಂಕ್; 85,000 ದಂಡ ವಿಧಿಸಿದ ಕೋರ್ಟ್
https://pragati.taskdun.com/latest/kannada-checkrejectsbi85177rs-fine-court/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ