Karnataka NewsPolitics

*ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ : ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೋವಿಡ್ ನಿಯಂತ್ರಣ ಸಂಬಂಧ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಕೂಡ ನಡೆದಿದೆ. ಸೋಂಕು ನಿಯಂತ್ರಣ ಕುರಿತು ಮಹತ್ವದ ಚರ್ಚೆ ನಡೆಸಲಾಗಿದೆ.ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಾಗಿದೆ. 

Home add -Advt

ಟೆಸ್ಟಿಂಗ್ ಕಿಟ್ ಗಳನ್ನು ರಾಜ್ಯಾದ್ಯಂತ ಆಸ್ಪತ್ರೆಗಳಿಗೆ ವಿತರಿಸಲಾಗಿದೆ. 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ತೆಗೆದೊಳ್ಳಲಾಗಿದ್ದು ನಾಳೆಯೊಳಗೆ RTPCR ಟೆಸ್ಟಿಂಗ್ ಕಿಟ್ ಗಳು ಕೂಡಾ ತಲುಪಲಿವೆ.

ಸದ್ಯಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆ ಇರುವುದರಿಂದ VRDL ಟೆಸ್ಟಿಂಗ್ ಕೇಂದ್ರಗಳಲ್ಲಿ ಉಸಿರಾಟ ಮತ್ತು ಹೃದಯ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Related Articles

Back to top button