ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ನೂತನವಾಗಿ ಆರಂಭಗೊಂಡ ಅಶೋಕ ಲೈಲೆಂಡ್ ಷೋರೂಂ ಉದ್ಘಾಟನೆ ಸಮಾರಂಭದಲ್ಲಿ ಯುವ ಕಾಂಗ್ರೆಸ್ ಮುಖಂಡ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ ಶುಭ ಕೋರಿದರು.
ಹೈಟೆಕ್ ಗ್ರುಪ್ ನ ಹೈಟೆಕ್ ಮೋಟಾರ್ಸ್ ಮತ್ತು ಅಟೋಮೋಬೈಲ್ ಪ್ರೈವೇಟ್ ಲಿಮಿಟೆಡ್ ಮಾಲಿಕತ್ವದಲ್ಲಿ ಈ ಷೋರೂಂ ಉದ್ಘಾಟನೆಗೊಂಡಿದೆ.
ಶೋ ರೂಂ ನಲ್ಲಿ ಬೆಳಗಾವಿ ತಾಲೂಕಿನ ಕೆಲಸಗಾರರನ್ನು ತೆಗೆದುಕೊಳ್ಳಬೇಕು. ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಸ್ಥಳೀಯರಿಗೆ ಅವಕಾಶ ನೀಡುವುದರಿಂದ ಈ ಭಾಗದ ನಿರುದ್ಯೋಗಿಗಳಿಗೆ ಕೆಲಸ ಸಿಗುವುದರೊಂದಿಗೆ ಅವರ ಜೀವನಕ್ಕೆ ದಾರಿಮಾಡಿಕೊಟ್ಟಂತಾಗುತ್ತದೆ ಎಂದು ಅವರು ಹೇಳಿದರು.
ಷೋರೂಂ ಉದ್ಘಾಟನೆಯ ಅಧ್ಯಕ್ಷತೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಅನಿಲ ಬೆನಕೆ, ಷೋರೂಂ ನ ಆಡಳಿತ ವರ್ಗದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ