Belagavi NewsBelgaum NewsKannada NewsKarnataka News

*ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ಒತ್ತಾಯ: ಕರವೆ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಆರ್ ಅಭಿಲಾಷ್ ನೇತೃತ್ವದಲ್ಲಿ   ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

 ಕರ್ನಾಟಕದಲ್ಲಿ ಲಕ್ಷಾಂತರ ಜನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿಸಿ, ಖಾಸಗಿ  ಕಂಪನಿಗಳಲ್ಲಿ ಕೆಲಸಕ್ಕಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ ಏಕೆಂದರೆ ಬೇರೆ ರಾಜ್ಯದ ಜನರು ಹೆಚ್ಚಿನ ಪ್ರಮಾಣದಲ್ಲಿ ಆ ಕೆಲಸಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ಅರ್ಹತೆ ಇದ್ದರೂ ಸಹ ನಮ್ಮ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕೂಡಲೇ  ಖಾಸಗಿ ಕಂಪನಿಗಳಲ್ಲಿ  ಕಡ್ಡಾಯವಾಗಿ ಕನ್ನಡಿಗರಿಗೆ ಮೀಸಲಾತಿಯನ್ನು ನೀಡುವಂತೆ ಆದೇಶಿಸಬೇಕಾಗಿ ಹೋರಾಟ ಮಾಡಲಾಯಿತು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button