Kannada NewsKarnataka News

*ಓವರ್ ಟೇಕ್ ಮಾಡಲು ಹೋಗಿ ಅಪಘಾತ: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಆಂದ್ರ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ತಡರಾತ್ರಿ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.

Home add -Advt

ಕಾರಿನಲ್ಲಿದ್ದ ವಿಶ್ವ (21) ಮತ್ತು ಸೂರ್ಯ (21) ಎಂಬ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಆಂಧ್ರ ಮೂಲದ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವ ಸಂದರ್ಭ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ರಾಮನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. 

Related Articles

Back to top button