Latest

ಚೋರ್ಲಾ ಘಾಟ್ ನಲ್ಲಿ ಮತ್ತೊಂದು ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಬೆಳಗಾವಿ: ಚೊರ್ಲಾ ಘಾಟ್ ನಲ್ಲಿ ಅಪಘಾತದ ಸರಣಿ ಮುಂದುವರೆದಿದೆ. ಘಾಟ್ ನಲ್ಲಿ ಕಾರೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಗೋವಾ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ವೇಗವಾಗಿ ಬಂದ ಕಾರು ಚೋರ್ಲಾ ಘಾಟ್ ನಲ್ಲಿ ಅಪಘಾತಕ್ಕೀಡಾಗಿದ್ದು, ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಮಹಾರಾಷ್ಟ್ರ ನೋಂದಣಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ಮೂಲದ ಸುಧೀರ್ ಕುಮಾರ್ ಹಾಗೂ ನೂರ್ ಶೇಖ್ ಮೃತರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಕರ್ನಾಟಕದ ಕಿರೀಟ; ಕನ್ನಡಿಗರ ಅಭಿವೃದ್ಧಿ, ರಕ್ಷಣೆಗೆ ಸರಕಾರ ಬದ್ಧ: ಸಿಎಂ ಬೊಮ್ಮಾಯಿ ಘೋಷಣೆ

https://pragati.taskdun.com/belagaviramadurgacm-basavaraj-bommai/

Related Articles

Back to top button