
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಇಲ್ಲಿಯ ಪ್ರಸಿದ್ಧ ಪೋತದಾರ ಜುವೆಲರ್ಸ್ ಪಾಲುದಾರ ಸುನೀಲ ಪೋತದಾರ (61) ಇಂದು ಮುಂಜಾನೆ ನಿಧನರಾದರು.
ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಮುಂಬೈ, ಬೆಂಗಳೂರು ಹಾಗೂ ಗೋವಾದಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಅಖಿಲ ಕರ್ನಾಟಕ ಗೋಲ್ಡ್ ಫೆಡರೇಶನ್ ಸದಸ್ಯರಾಗಿ, ಉತ್ತರ ಕರ್ನಾಟಕ ಜುವೆಲರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸುತ್ತಿದ್ದರು.
ಕಳೆದ 30 ವರ್ಷಗಳಿಂದ ಜುವೆಲರಿ ವ್ಯವಹಾರದಲ್ಲಿ ತೊಡಗಿಕೊಂಡಿದ್ದರು.
ಇಂದು ಮಧ್ಯಾಹ್ನ 2 ಗಂಟೆಗೆ ಸದಾಶಿವನಗರ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.