ಗೋವಾ: ಚುನಾವಣೆ ಪ್ರಚಾರ ಕಾರ್ಯಾಲಯ ಉದ್ಘಾಟಿಸಿದ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ,  ​ಪಣಜಿ – ಗೋವಾ ರಾಜ್ಯ ವಿಧಾನಸಭೆಯ ಚುನಾವಣೆಯ ಪ್ರಯುಕ್ತ​ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು 2 ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದು, ಸೋಮವಾರ ಪ್ರಚಾರ ಕಾರ್ಯಾಲಯವನ್ನು ಉದ್ಘಾಟಿಸಿದರು.
 
 ಗೋವಾ ಪ್ರದೇಶ ಕಾಂಗ್ರೆಸ್ ಸಮೀತಿಯ ಕಚೇರಿಯಲ್ಲಿ​ ಕಾಂಗ್ರೆಸ್ ನ ಗೋವಾ ರಾಜ್ಯದ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರೊಂದಿಗೆ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ  ಚುನಾವಣೆಯ ರೂಪು​ರೇಷೆಗಳ ಕುರಿತಾಗಿ ಚರ್ಚಿಸಿದ​ ಹೆಬ್ಬಾಳಕರ್ ನಂತರ ​ಪ್ರಚಾರ ಕಾರ್ಯಾಲಯಕ್ಕೆ ಚಾಲನೆ ನೀಡಿದರು. ಗೋವಾ ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತಿ, ಅಭ್ಯರ್ಥಿ ಒಲ್ಯಾನ್ಸಿಯೋ ಸಿಮೋಸ್ ಮೊದಲಾದವರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button