Kannada NewsLatest
ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್ : ಬೆಳಗಾವಿಯಲ್ಲಿ ಯುವತಿಯ ತಂದೆ ಕಿಡ್ನ್ಯಾಪ್ ದೂರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ದೊಡ್ಡ ಟ್ವಿಸ್ಟ್ ಸಿಕ್ಕಿದೆ.
ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ತಂದೆ ಪ್ರಕಾಶ ನಾಗಪ್ಪ ಕಂಚೇರ್ ಬೆಳಗಾವಿಯಲ್ಲಿ ದೂರು ನೀಡಿದ್ದಾರೆ.
ಬೆಳಗಾವಿಯ ಹನುಮಾನ್ ನಗರದ ವಿಳಾಸ ನೀಡಿರುವ ಪ್ರಕಾಶ್, ತಮ್ಮ ಮಗಳನ್ನು ಮಾರ್ಚ್ 2ರಂದು ಬೆಂಗಳೂರಿನಲ್ಲಿ ಅಪರಿಚಿತರು ಅಪಹರಿಸಿದ್ದಾರೆ ಎಂದು ದೂರಿದ್ದಾರೆ.
ಎಪಿಎಂಸಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈಗಷ್ಟೆ ದೂರು ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಸಲಾಗುವುದು ಎಂದು ಡಿಸಿಪಿ ವಿಕ್ರಂ ಅಮಟೆ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಯುವತಿಯ ಮನೆ ಬೆಳಗಾವಿಯಲ್ಲೇ ಇದೆ ಎನ್ನುವುದು ಇದೀಗ ಬಹಿರಂಗವಾಗಿದ್ದು, ತಮ್ಮ ಮಗಳ ಅಪಹರಣವಾಗಿದೆ ಎಂದು ದೂರು ನೀಡಿರುವುದು ಮತ್ತೊಂದು ದೊಡ್ಡ ಟ್ವಿಸ್ಟ್ ಗೆ ಕಾರಣವಾಗಿದೆ.
ರಮೇಶ್ ಜಾರಕಿಹೊಳಿಯೇ ಸಿಡಿ ಬಿಡುಗಡೆ ಮಾಡಿದ್ದಾರೆ – ಸಂತ್ರಸ್ತೆ ಎನ್ನಲಾದ ಯುವತಿಯ ಹೇಳಿಕೆ
ಸಂಚುಕೋರರೊಂದಿಗೆ ಸೇರಿ ಯುವತಿ ವಿಡೀಯೋ ಬಿಡುಗಡೆ -ರಮೇಶ ಜಾರಕಿಹೊಳಿ