
ಪ್ರಗತಿವಾಹಿನಿ ಸುದ್ದಿ; ಪಣಜಿ: ಅತಂತ್ರ ಸ್ಥಿತಿ ನಿರ್ಮಾಣವಾಗುವ ಆತಂಕದಲ್ಲಿ ಗೋವಾ ಬಿಜೆಪಿಯಲ್ಲಿ ಇದೀಗ ನಿಚ್ಛಳ ಬಹುಮತ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
40 ವಿಧಾನಸಭಾ ಕ್ಷೇತ್ರಗಳ ಪೈಕಿ ಗೋವಾದಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಪಡೆದುಕೊಂಡಿದ್ದು, ಗೋವಾದಲ್ಲಿ ಬಿಜೆಪಿ ಸರ್ಕಾರ ರಚನೆಯ ಹಾದಿ ಸುಗಮವಾದಂತಾಗಿದೆ.
ಬಿಜೆಪಿ 20, ಕಾಂಗ್ರೆಸ್ 11, ಟಿಎಂ ಸಿ 3, ಆಪ್ 2 ಹಾಗೂ ಪಕ್ಷೇತರರು 4 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಪಕ್ಷೇತರ ಬೆಂಬಲ ಪಡೆದು ಸರ್ಕಾರ ರಚನೆಗೆ ಮುಂದಾಗಿದ್ದು, ಚರ್ಚೆ ನಡೆಸಿದ್ದಾರೆ.
ಮತ್ತೊಂದೆಡೆ ಗೋವಾದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ರಾಜ್ಯಪಾಲರ ಭೇಟಿಗಾಗಿ ಬಿಜೆಪಿ ನಾಯಕರು ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಗೋವಾದಲ್ಲಿ ಪ್ರಮೋದ್ ಸಾವಂತ್ ನೇತೃತ್ವದ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ .
ವಿಪಕ್ಷಗಳು ಧೂಳಿಪಟ; ನವ ಭಾರತ ನಿರ್ಮಾಣ ಕನಸು ಜನರಿಂದಲೇ ಅನುಷ್ಠಾನ