Latest

ಶಿವಮೊಗ್ಗಕ್ಕೂ ವಕ್ಕರಿಸಿದ ಬ್ರಿಟನ್ ಕೊರೊನಾ; ಒಂದೇ ಕುಟುಂಬದ ನಾಲ್ವರಲ್ಲಿ ರೂಪಾಂತರ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ರೂಪಾಂತರ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಶಿವಮೊಗ್ಗಕ್ಕೂ ಬ್ರಿಟನ್ ವೈರಸ್ ಕಾಲಿಟ್ಟಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ರಾಜ್ಯದಲ್ಲಿ ಒಟ್ಟು 7 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಿನ ಮೂವರಲ್ಲಿ ಈ ಹೊಸ ಕೊರೊನಾ ಪ್ರಭೇದ ಪತ್ತೆಯಾಗಿದ್ದು, ಶಿವಮೊಗ್ಗದ ನಾಲ್ವರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟಿದೆ. ಶಿವಮೊಗ್ಗದ ನಲವರು ಕೂಡ ಒಂದೇ ಕುಟುಂಬದ ಸದಸ್ಯರಾಗಿದ್ದಾರೆ ಎಂದು ತಿಳಿಸಿದರು.

ದೇಶದಲ್ಲಿ ಈ ವರೆಗೆ ಬ್ರಿಟನ್ ನಿಂದ ಆಗಮಿಸಿದ ಒಟ್ಟು 26 ಜನರಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ. ಸೋಂಕಿನ ತೀವ್ರತೆ ಕಡಿಮೆಯಿದೆ. ಆದರೆ ಸೋಂಕು ವೇಗವಾಗಿ ಹರಡುತ್ತದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ ಎಂದು ತಿಳಿಸಿದರು.

Related Articles

Back to top button