ಪ್ರಗತಿವಾಹಿನಿ ಸುದ್ದಿ; ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಘಟಕಕ್ಕೆ ಶಾಸಕರು ಬಿಗ್ ಶಾಕ್ ನೀಡಿದ್ದು, ಮಾಜಿ ಸಿಎಂ ದಿಗಂಬರ ಕಾಮತ್ ಸೇರಿದಂತೆ 8 ಶಾಸಕರು ಬಿಜೆಪಿಗೆ ಅಧಿಕೃವಾಗಿ ಸೇರ್ಪಡೆಯಾಗಿದ್ದಾರೆ.
ಇಂದು ಬೆಳಿಗ್ಗೆಯಷ್ಟೇ 8 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಸದಾನಂದ್ ಶೇಟ್ ತಾನವರೆ ಹೆಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಇದೀಗ ಗೋವಾ ಸಿಎಂ ಪ್ರಮೋದ್ ಸಾವಂತ್ ಸಮ್ಮುಖದಲ್ಲಿ ಕಾಂಗ್ರೆಸ್ ನ 8 ಶಾಸಕರು ಬಿಜೆಪಿಗೆ ಸೇರಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಸಿಎಂ ದಿಗಂಬರ ಕಾಮತ್, ಮಿಚೆಲ್ ಲೋಬೋ, ಡೆಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ ಅಮೋನ್ಕರ್, ಅಲೆಕ್ಸೋ ಸಿಕ್ವೆರಾ, ರುಡಾಫ್ ಫರ್ನಾಂಡೀಸ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಗೋವಾದಲ್ಲಿ ಕಾಂಗ್ರೆಸ್ ನ 8 ಶಾಸಕರು ಬಿಜೆಪಿಗೆ ಸೇರ್ಪಡೆಯಾದರೆ ಇನ್ನು ಕಾಂಗ್ರೆಸ್ ನಲ್ಲಿ ಮೂವರು ಶಾಸಕರು ಮಾತ್ರ ಇದ್ದಾರೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.
https://pragati.taskdun.com/politics/goacongress-mlasbjp-join/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ