Latest

ಕಾಂಗ್ರೆಸ್ ನ 8 ಶಾಸಕರು ಬಿಜೆಪಿಗೆ

ಪ್ರಗತಿವಾಹಿನಿ ಸುದ್ದಿ; ಪಣಜಿ: ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಾಡೆ ತಿಳಿಸಿದ್ದಾರೆ.

ಇತ್ತೀಚೆಗೆ ಗೋವಾದಲ್ಲಿ 11 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗಿತ್ತು. ಪಕ್ಷಾಂತರ ಪರ್ವಕ್ಕೆ ಕಾಂಗ್ರೆಸ್ ಹಲವು ಯತ್ನ ನಡೆಸಿತ್ತು. ಅದರ ಹೊರತಾಗಿಯೂ ಇದೀಗ 8 ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.

ವಿಧಾನಸಭಾ ಸ್ಪೀಕರ್ ಅವರನ್ನು ಶಾಸಕರು ಭೇಟಿಯಾಗಿದ್ದು ಈ ಸುದ್ದಿಗೆ ಇನ್ನಷ್ಟು ಪುಷ್ಠಿ ನೀಡುವಂತಿದೆ.

ಎರಡು ತಿಂಗಳ ಹಿಂದೆ ದಿಗಂಬರ್ ಕಾಮತ್, ಮೈಕೆಲ್ ಲೋಬೋ ಸೇರಿದಂತೆ ಕಾಂಗ್ರೆಸ್ ನ 11 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿತ್ತು. ಪಕ್ಷಾಂತರ ವಿರೋಧಿ ಕಾನೂನಡಿ ಕಾಮತ್ ಹಾಗೂ ಲೋಬೋ ಇಬ್ಬರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಸ್ಪೀಕರ್ ಬಳಿ ಮನವಿ ಮಾಡಿತ್ತು. ಉಳಿದವರನ್ನು ಪಕ್ಷದಲ್ಲಿಯ್ ಉಳಿಸಿಕೊಳ್ಳಲು ಕಾಂಗ್ರೆಸ್ ಯಶಸ್ವಿಯಾಗಿತ್ತು. ಆದರೆ ಇದೀಗ 8 ಶಾಸಕರು ಮತ್ತೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಲುವೆಗೆ ಉರುಳಿ ಬಿದ್ದ ಆಟೋ; ಇಬ್ಬರು ಸ್ಥಳದಲ್ಲೇ ದುರ್ಮರಣ

Home add -Advt

https://pragati.taskdun.com/latest/bangalore3-school-girlsmissing/

Related Articles

Back to top button