Latest

ಗೋವಾ ಕಂಗುಟ್ ಬೀಚ್ ನಲ್ಲಿ ಕೋವಿಡ್ ನಿಯಮ ಮರೆತ ಪ್ರವಾಸಿಗರು

ಪ್ರಗತಿವಾಹಿನಿ ಸುದ್ದಿ; ಪಣಜಿ: ಗೋವಾಕ್ಕೆ ಸದ್ಯ ದೇಶೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಗೋವಾಕ್ಕೆ ಆಗಮಿಸುವ ಪ್ರವಾಸಿಗರು ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡದಿರುವುದು ಆತಂಕ ಹೆಚ್ಚುವಂತೆ ಮಾಡಿದೆ.

ಗೋವಾ ರಾಜ್ಯ ಜಗತ್ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಪ್ರಸಕ್ತ ವರ್ಷ ಕೋವಿಡ್ ನಿಯಮಾವಳಿಗಳ ಹಿನ್ನೆಲೆಯಲ್ಲಿ ವಿದೇಶಿ ಪ್ರವಾಸಿಗರ ಕೊರತೆಯುಂಟಾಗಿದೆ. ಸದ್ಯ ಗೋವಾಕ್ಕೆ ಕರ್ನಾಟಕ, ದೆಹಲಿ, ಕೇರಳ, ಆಂಧ್ರ, ಮಹಾರಾಷ್ಟ್ರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಗೋವಾದಲ್ಲಿ ಎಲ್ಲ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಗರ್ದಿ ಕಂಡುಬರುತ್ತಿದೆ. ಆದರೆ ಪ್ರವಾಸಿಗರು ಕೋವಿಡ್ ನಿಯಮಾವಳಿಗಳನ್ನು ಪಾಲಿಸದಿರುವುದು ರಾಜ್ಯದಲ್ಲಿ ಕರೋನಾ ಪ್ರಕರಣ ಹೆಚ್ಚಲು ಕಾರಣವಾಗುತ್ತಿದೆಯೇ…? ಎಂಬ ಪ್ರಶ್ನೆ ಎದುರಾಗಿದೆ.

ಗೋವಾದ ಕಲಂಗುಟ್, ಬಾಗಾ, ಶಿಕೇರಿ, ಕೋಲ್ವಾ, ಮೀರಾಮಾರ, ದೋನಾಪಾವುಲ್ ಸೇರಿದಂತೆ ಪ್ರಮುಖ ಬೀಚ್‌ಗಳಲ್ಲಿ ಪ್ರವಾಸಿಗರ ಗರ್ದಿ ಕಂಡುಬರುತ್ತಿದೆ. ಆದರೆ ಗೋವಾಕ್ಕೆ ಆಗಮಿಸುವ ಪ್ರವಾಸಿಗರು ಮಾಸ್ಕ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಜರ್ ಬಳಕೆ ಮಾಡುವುದು ಹೀಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದಿದ್ದರೆ ಕರೋನಾ ಸೋಂಕು ಹರಡುವುದು ಭೀತಿ ಎದುರಾಗಿದೆ.

ರಾಜ್ಯದಲ್ಲಿ ಕಳೆದ ತಿಂಗಳು ಕರೋನಾ ಸೋಂಕಿನಿಂದ ಗುಣಮುಖ ರಾಗುವವರ ಸಂಖ್ಯೆ ಶೇ.100ಕ್ಕೆ ನೂರರಷ್ಟಿತ್ತು, ಆದರೆ ಸದ್ಯ ಈ ಪ್ರಮಾಣ ಸುಮಾರು ಶೇ ೫೦ ಕ್ಕೆ ಇಳಿಕೆಯಾಗಿದೆ. ಇದರಿಂದಾಗಿ ಕೋವಿಡ್ ನಿಯಮಾವಳಿಗಳನ್ನು ಗೋವಾಕ್ಕೆ ಆಗಮಿಸುವ ಪ್ರವಾಸಿಗರು ಮಾತ್ರವಲ್ಲದೆಯೇ ಇಲ್ಲಿನ ಜನತೆ ಕೂಡ ಖಡ್ಡಾಯವಾಗಿ ಪಾಲನೆ ಮಾಡಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button