
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಭಾರಿ ಮಳೆಯಾಗುತ್ತಿದ್ದು, ಮಳೆ ಅವಾಂತರದ ನಡುವೆಯೇ ಗೋಡೌನ್ ಒಂದರ ಗೋಡೆ ಕುಸಿದು ಬಿದ್ದು 5 ಜನರು ಮೃತಪಟ್ಟ ಘಟನೆ ನಡೆದಿದೆ.
ದೆಹಲಿಯ ಅಲಿಪುರದಲ್ಲಿ ಈ ದುರಂತ ಸಂಭವಿಸಿದ್ದು, ಗೋಡೌನ್ ಗೋಡೆ ಕುಸಿದು 5 ಕಾರ್ಮಿಕರು ಮೃತಪಟ್ಟಿದ್ದಾರೆ. 14 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಅವಶೇಷಗಳಡಿಯಲ್ಲಿ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ನೋಡ ನೋಡುತ್ತಿದ್ದಂತೆ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋದ ಅರ್ಚಕ