Belagavi NewsBelgaum News

*ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ಬೆಳಗಾವಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

Related Articles

ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೆಂಪಣ್ಣ ರಾಮಪ್ಪ ಹರಿಜನ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದ. ತನಿಖಾಧಿಕಾರಿ ಶಶಿಧರ ವಸಂತ್ ನೇತೃತ್ವದ ತಂಡ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಆರೋಪಿಯ ಕೃತ್ಯಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪುಷ್ಪಲತಾ, ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ 10 ಸಾವಿರ ರೂ.ದಂಡ ಪಾವತಿಸಲು ಸೂಚಿಸಿದ್ದಾರೆ.

Home add -Advt

ಸರ್ಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಎಲ್ ಬಿ ಪಾಟೀಲ ರವರು ವಾದ ಮಂಡಿಸಿದ್ದರು. ಪ್ರಕರಣದ ತನಿಖಾಧಿಕಾರಿ ಹಾಗೂ ತಂಡದವರನ್ನು ಬೆಳಗಾವಿ ಎಸ್ ಪಿ, ಗೋಕಾಕ್ ಡಿ ಎಸ್ ಪಿ ಶ್ಲಾಘಿಸಿದ್ದಾರೆ.


Related Articles

Back to top button