ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ರಾಜ್ಯದಲ್ಲಿ ಕನ್ನಡ ಶಾಲೆ ಉಳಿವಿಗಾಗಿ ಹೋರಾಟ ನಡೆಸಬೇಕಾದ ಅಗತ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ 11ನೇ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಉಳಿಸಲು ಗೋಕಾಕ್ ಚಳುವಳಿ ಮಾದರಿಯಲ್ಲಿ ಮತ್ತೊಂದು ಚಳುವಳಿ ನಡೆಯಬೇಕಿದೆ ಎಂದು ಕರೆ ನೀಡಿದರು.
ಹೋರಾಟದ ವಿಚಾರವಾಗಿ ಶೀಘ್ರದಲ್ಲಿಯೇ ದುಂಡು ಮೇಜಿನ ಸಭೆ ನಡೆಸಲಾಗುವುದು. ದುಂಡು ಮೇಜಿನ ಸಭೆಯ ಅಧ್ಯಕ್ಷತೆಯನ್ನು ಕಾದಂಬರಿಕಾರ ಎಸ್.ಎಲ್.ಭೈರಪ್ಪ ವಹಿಸಲಿದ್ದಾರೆ ಎಂದು ಹೇಳಿದರು. ಕೋವಿಡ್ ಸಂದರ್ಭದಲ್ಲಿ ಶೇ.20ರಷ್ಟು ಮಕ್ಕಳು ಕನ್ನಡ ಶಾಲೆಯನ್ನೇ ತೊರೆದಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಲ್ಲೂ ಇಂಗ್ಲೀಷ್ ಶಿಕ್ಷಣದ ವ್ಯಾಮೋಹ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಕನ್ನಡ ಶಾಲೆ ಉಳಿವಿಗಾಗಿ ಗೋಕಾಕ್ ಚಳುವಳಿ ಮಾದರಿಯಲ್ಲಿ ಹೋರಾಟ ಮಾಡಲೇಬೇಕಾದ ಅಗತ್ಯವಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ