Politics

*ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ: ಹೆಚ್.ಡಿ.ರೇವಣ್ಣ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿದ್ದಾರೆ ಎಂದು ಶಾಸಕ ಹೆಚ್.ಡಿ.ರೇವನ್ಣ ತಿಳಿಸಿದ್ದಾರೆ.

Home add -Advt

ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸುವ ಮೊದಲು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಲಾಗಿದೆ. ಯಾವುದೇ ಪುರಾವೆ ಇಲ್ಲದೇ ದುರುದ್ದೇಶದಿಂದ ನನ್ನನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ನನ್ನ 40 ವರ್ಷಗಳ ರಾಜಕೀಯದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನು ಎದುರಿಸುವ ಶಕ್ತಿಯಿದೆ. ಆಮೇಲೆ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.

ವೈದ್ಯಕೀಯ ತಪಾಸಣೆ ಬಳಿಕ ಹೆಚ್.ಡಿ.ರೇವನ್ನ ಅವರನ್ನು ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಹಾಜರುಪಡಿಸಲಿದ್ದಾರೆ.

Related Articles

Back to top button