Belgaum NewsKannada NewsKarnataka News
*ಶ್ರೀ ಅಡವಿಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ರ ಮೃಣಾಲ್ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಗೋಕಾಕ ತಾಲೂಕಿನ ಅಂಕಲಗಿಯ ಶ್ರೀ ಅಡವಿಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಈ ಸಮಯದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು, ಮಠದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಗೋಕಾಕ ತಾಲೂಕಿನ ಶ್ರೀಕ್ಷೇತ್ರ ತವಗಮಠಕ್ಕೆ ತೆರಳಿ ಶ್ರೀ ಸದ್ಗುರು ಬಾಳಯ್ಯ ಮಹಾಸ್ವಾಮಿಗಳ ಕರ್ತೃ ಸ್ಥಾಪಿತ ನುಡಿ ಗದ್ದುಗೆಗೆ ಗೌರವ ನಮನ ಸಲ್ಲಿಸಿ, ಶ್ರೀ ನಿರುಪಾದೀಶ್ವರ ಅಜ್ಜನವರ ಆಶೀರ್ವಾದ ಪಡೆದರು.
ಈ ಸಮಯದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ