ಗೋಕಾಕನಲ್ಲಿ ಸೈಕಲ್ ತುಳಿದು ಪ್ರತಿಭಟಿಸಿದ ಯೂತ್ ಕಾಂಗ್ರೆಸ್ ಸದಸ್ಯರಾದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ; ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಪಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು.
ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತದಲ್ಲಿ ಮುಕ್ತಾಯವಾಯಿತು.
ಜಾಥಾ ಉದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಕೂಡಲೇ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೇ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಕಾರ್ಯಕರ್ತರಷ್ಟೇ ಅಲ್ಲದೇ ಪ್ರಿಯಾಂಕಾ ಹಾಗೂ ರಾಹುಲ್ ಅವರ ಅಭಿಮಾನಿಗಳು, ಸಾರ್ವಜನಿಕರು ಕೂಡ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಪ್ರಿಯಾಂಕಾ ಹಾಗೂ ರಾಹುಲ್ ಅವರು, ಕೆಪಿಸಿಸಿ ಆದೇಶದ ಮೇರೆಗೆ ಇಂದು ಗೋಕಾಕನಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಪ್ರತಿಭಟನೆಯ ಕೇಂದ್ರ ಬಿಂದುವಾಗಿ ಪಕ್ಷ ಮತ್ತು ಕಾರ್ಯಕರ್ತರನ್ನು ಸಂಘಟಿಸುವಲ್ಲಿ ಯಶಸ್ವಿಯಾದರು.
ಮುಖಂಡರಾದ ವಿವೇಕ ಜತ್ತಿ, ರಾಹುಲ್ ಬಡೆಸಗೋಳ, ರೆಹಮಾನ್ ಮೊಕಾಶಿ, ಪ್ರವೀಣ ಗುಡ್ಡಾಕಾಯಿ, ಬಸವರಾಜ ಸಾಯಣ್ಣವರ, ಸುನೀಲ ಅಂಕದವರ, ಕಲ್ಪನಾ ಕರೆನ್ನವರ್, ಯಶೋಧಾ ಬಿರಡಿ, ಶಿವು ಕಿಲಾರಿ, ಬಸವಣ್ಣೆಪ್ಪ ಪರುಶೆಟ್ಟಿ, ಇಮ್ರಾನ್ ತಪಕೀರ್, ರಾಜು ಮೇದಾರ, ಪ್ರಕಾಶ ಬಸಾಪುರೆ, ಮಾರುತಿ ಗುಟಗುದ್ದಿ, ಜುಬೇರ್ ಮಿರ್ಜಾನಾಯ್ಕ್ ಸೇರಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ